ನಗರದಲ್ಲಿ ಲಿಂಗಾಯತ ವಿದ್ಯಾಭಿವೃದ್ಧಿ ಸಂಸ್ಥೆಯಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಚಂದ್ರಕಾಂತ ಮಟ್ಟಿ ಧ್ವಜಾರೋಹಣವನ್ನು ನೇರವೇರಿಸಿದರು. ಈ ಸಂದರ್ಭದಲ್ಲಿ ಜಂಟಿ ಕಾರ್ಯದರ್ಶಿಗಳಾದ ಎಸ್.ಎಂ.ಅಗಡಿ, ಆಡಳಿತ ಮಂಡಳಿ ಸದಸ್ಯರಾದ ಬಿ.ಎಸ್.ತಾಳಿಕೋಟಿ ಅಂಗ ಸಂಸ್ಥೆಗಳಾದ ಬಸವಶ್ರೀ ಶಿಶುವಿಹಾರ, ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಕನ್ನಡ ಪ್ರೌಢ ಶಾಲೆ, ಅವ್ವಪ್ಪಣ್ಣ ಅತ್ತಿಗೇರಿ ಕೈಗಾರಿಕಾ ತರಬೇತಿ ಸಂಸ್ಥೆ, ವಿಜ್ಞಾನ, ಕಲಾ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯ ಮತ್ತು ಹುರಕಡ್ಲಿ ಅಜ್ಜ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯರು ಶಿಕ್ಷಕ ಸಿಬ್ಬಂದಿ ಮತ್ತು ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.