ಬೀದರ್: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಖಾಶೆಂಪುರ್ (ಪಿ) ಗ್ರಾಮದಲ್ಲಿ ಪ್ರತಿ ವರ್ಷದಂತೆಯೂ ಈ ವರ್ಷವೂ ಸಾಂಪ್ರದಾಯಿಕವಾಗಿ ದಸರಾ ಹಬ್ಬವನ್ನು ಆಚರಿಸಲಾಯಿತು. ಅದೇ ಗ್ರಾಮದವರಾದ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ಅವರು ಸ್ವಗ್ರಾಮದಲ್ಲಿ ನಡೆದ ಸಾಂಪ್ರದಾಯಿಕ ದಸರಾ ಹಬ್ಬದಲ್ಲಿ ಪಾಲ್ಗೊಂಡು ಶುಭ ಹಾರೈಸಿದರು.