ಪ್ರೆಸ್ಟೀಜ್ ಜಿಂದಾಲ್ ಸಿಟಿ ಅಪಾರ್ಟ್‌ಮೆಂಟ್ ಓನರ್‍ಸ್ ಅಸೋಸಿಯೇಷನ್ ವತಿಯಿಂದ ಏರ್ಪಡಿಸಿದ್ದ ೭೭ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ನಿವೃತ್ತ ಲೋಕಾಯುಕ್ತ, ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಾಧೀಶ ಸಂತೋಷ್ ಹೆಗಡೆ ಅವರನ್ನು ಸನ್ಮಾನಿಸಲಾಯಿತು. ಮಾಜಿ ಸೇನಾಧಿಕಾರಿ ಕರ್ನಲ್ ದಿನೇಶ್ ಕುಮಾರ್, ಲೆ. ಕರ್ನಲ್ ಅಜಸ್ಪಾಲ್, ಪ್ರೆಸ್ಟೀಜ್ ಗ್ರೂಪ್‌ನ ಕಾರ್ಯಕಾರಿ ನಿರ್ದೇಶಕ ಸ್ವರೂಪ್, ಅಧ್ಯಕ್ಷ ಬಿ.ಎಂ. ನಾರಾಯಣ್, ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.