ಕಲಬುರಗಿ:ನಗರದ ಶಹಾಬಜಾರನ ಸುಲಫಲ ಮಠದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ವು ಸೋಮವಾರ ಹಮ್ಮಿಕೊಂಡಿದ್ದ ವಿಜಯದಶಮಿ ಹಬ್ಬದ ಪ್ರಯುಕ್ತ ಬನ್ನಿ ಮುರಿಯುವ ಕಾರ್ಯಕ್ರಮಕ್ಕೆ ಸುಲಫಲ ಮಠದ ಪರಮಪೂಜ್ಯ ಜಗದ್ಗುರು ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ಚಾಲನೆ ನೀಡಿದರು.