ಬೆಂಗಳೂರಿನ ಜಯನಗರದ ೫ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮ ಪೂಜ್ಯ ಶ್ರೀ೧೦೦೮ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಅನುಗ್ರಹ ಆದೇಶದಂತೆ ಶ್ರೀಮಠದ ವ್ಯವಸ್ಥಾಪಕರಾದ ಆರ್,ಕೆ ವಾದಿಂದ್ರಾಚಾರ್ಯರ ನೇತೃತ್ವದಲ್ಲಿ ಪುರೋಹಿತರಾದ ಶ್ರೀ ನಂದಕಿಶೋರ ಆಚಾರ್ಯರು ಹಾಗೂ ಜಿ, ಕೆ ಆಚಾರ್ಯರ ನೇತೃತ್ವದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ೩೫೨ನೇ ಉತ್ತರಾಧನೆ ಮಹೋತ್ಸವದ ಅಂಗವಾಗಿ ಜಯನಗರದ ರಾಜಬೀದಿಗಳಲ್ಲಿ ಸ್ವಾಮಿಗಳ ಮಹಾರಥೋತ್ಸವವನ್ನು ಅದ್ದೂರಿಯಾಗಿ ನೆರವೇರಿಸಲಾಯಿತು. ಮೆರವಣಿಗೆಯಲ್ಲಿ ಸಹಸ್ರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.