
ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ “ಬಿಸಿನೆಸ್ ಎಕ್ಸ್‌ಲೆನ್ಸ್ ಅವಾರ್ಡ್-೨೦೨೩” ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅವಿರತ ಸೇವೆ ಸಲ್ಲಿಸಿ, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕಮಲಾ ನಗರದ ಗೌತಮ್ ಪಬ್ಲಿಕ್ ಶಾಲೆಯ ಅಧ್ಯಕ್ಷೆ ಲೀಲಾವತಿ ಅವರಿಗೆ ಟಿವಿ ಮಾಧ್ಯಮದ ವತಿಯಿಂದ ಪ್ರಶಸ್ತಿ ನೀಡಿ ಗೌರವಿಸಲಾಯಿತು.