ಮಳೆಯ ಅಭಾವದಿಂದ ಉಂಟಾಗಿರುವ ಬರಗಾಲದ ಹಾನಿಗೆ ಪರಿಹಾರ ನೀಡಿಕೆಗೆ ಆಗ್ರಹಿಸಿ ಅನಿಯಮಿತ ಲೋಡ್ ಶೆಡ್ಡಿಂಗ್, ರೈತಪರ ಯೋಜನೆಗಳನ್ನು ರದ್ದುಗೊಳಿಸಿರುವುದನ್ನು ಖಂಡಿಸಿ ಹಾಗೂ ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ತಡೆಯಬೇಕೆಂದು ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ವತಿಯಿಂದ ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ನಂತರ ತಹಶಿಲ್ದಾರ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಬಸವರಾಜ್ ಕುಂದಗೋಳಮಠ, ರಾಘವೇಂದ್ರ ಪಾಟೀಲ್, ಚಂದ್ರಶೇಖರ ಅರಳಿ, ಯಲ್ಲಪ್ಪಗೌಡ ಪಾಟೀಲ್ ಮತ್ತಿತರರು ಪಾಲ್ಗೊಂಡಿದ್ದರು.