
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಚನ್ನವೀರೇಶ್ವರ ಪ್ರಾಥಮಿಕ ಹಾಗೂ ಪ್ರೌಢಶಾಲೆ ಬಾಲಕರ ವಾಲಿಬಾಲ್‍ಎರಡು ತಂಡಗಳು ಸಿದ್ದಾಪುರದ ಪುಷ್ಪ ತಾಯಿ ಶಾಲೆಯಲ್ಲಿನಡೆದ ಜಮಖಂಡಿ ತಾಲೂಕ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಬಾಗಲಕೋಟೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯ ಗುರುಗಳು ಹಾಗೂ ಸಿಬ್ಬಂದಿ ವರ್ಗ ಮತ್ತು ಸಂಸ್ಥೆಯ ಅಧ್ಯಕ್ಷರು ಎಲ್ಲ ಸದಸ್ಯರು ವಿಜೇತ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.