ನಾಳೆ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಅಂಗವಾಗಿ ಇಂದು ಬೆಳಿಗ್ಗೆ ಚೆನ್ನಮ್ಮ ವೃತ್ತದ ಬಳಿ ಇರುವ ಈದ್ಗಾ ಮೈದಾನದಲ್ಲಿ ಹಂದರಗಂಬ ಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರುಗಳಾದ ಅರವಿಂದ್ ಬೆಲ್ಲದ್, ಮಹೇಶ್ ಟೆಂಗಿನಕಾಯಿ, ಮುಖಂಡರಾದ ಸಂಜೀವ್ ಬಡಸ್ಕರ್, ಸುಭಾಷಸಿಂಗ್ ಜಮಾದಾರ, ಮತ್ತಿತರರು ಉಪಸ್ಥಿತರಿದ್ದರು.