ಕರ್ನಾಟಕ ಸರ್ಕಾರವು ವಿವಿಧ ಕ್ಷೇತ್ರದ 65ಸಾಧಕರನ್ನು ಗುರುತಿಸಿ 2020 ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದ್ದು ಮೈಸೂರು ಭಾಗದಿಂದ ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿ ಆಯ್ಕೆಯಾಗಿರುವ ಡಾ.ಚಂದ್ರಶೇಖರ್ ರವರನ್ನು ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು
ಇದೇ ಸಂದರ್ಭದಲ್ಲಿ ಸಮಾಜ ಸೇವಕರಾದ ಎನ್ ಎಂ ನವೀನ್ ಕುಮಾರ್ ,ಕೃಷ್ಣರಾಜೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ ,ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ,ಅಜಯ್ ಶಾಸ್ತ್ರಿ ,ನವೀನ್ ಕೆಂಪಿ ,ಪೈಲ್ವಾನ್ ಸುನೀಲ್ ,ಹಾಗೂ ಇನ್ನಿತರರು ಹಾಜರಿದ್ದರು