75ನೇ ಗಣರಾಜ್ಯೋತ್ಸವ ಆಚರಣೆ

ಧಾರವಾಡ, ಜ.27: ಕರ್ನಾಟಕ ಉಚ್ಛ ನ್ಯಾಯಾಲಯ, ಧಾರವಾಡ ಪೀಠದಲ್ಲಿ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಹಿರಿಯ ನ್ಯಾಯಮೂರ್ತಿ ಎಸ್.ಜಿ.ಪಂಡಿತ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎನ್.ಎಸ್.ಸಂಜಯಗೌಡ, ಎಸ್.ವಿಶ್ವಜಿತ್ ಶೆಟ್ಟಿ, ರಾಜೇಶ ರೈ, ಹಾಗೂ ಕೆ.ವಿ.ಅರವಿಂದ, ಕೇಂದ್ರ ಸರ್ಕಾರದ ಸಾಲಿಸಿಟರ ಜನರಲ್, ರಾಜ್ಯ ಸರ್ಕಾರ ವಕೀಲರು, ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್ ಮತ್ತು ವಕೀಲರ ಸಂಘದ ಪದಾಧಿಕಾರಿಗಳು, ಕರ್ನಾಟಕ ಉಚ್ಛ ನ್ಯಾಯಾಲಯದ ಅಧಿಕ ಮಹಾ ವಿಲೇಖನಾಧಿಕಾರಿ ರೋಣ ವಾಸುದೇವ, ಹಾಗೂ ಅಧಿಕ ಮಹಾ ವಿಲೇಖನಾಧಿಕಾರಿ (ನ್ಯಾಯಾಂಗ) ವೆಂಕಟೇಶ ಹುಲಗಿ ಅವರು ಉಪಸ್ಥಿತರಿದ್ದರು.