ಬೀದರ್: ಜೂ.30:ಶಾಹೀನ್ ಶಿಕ್ಷಣ ಸಂಸ್ಥೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ವತಿಯಿಂದ ಕನ್ನಡ ಮಾಧ್ಯಮದ 75 ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಪುನರಾವರ್ತಿತ ಉಚಿತ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ತಿಳಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ನೀಟ್‍ನಲ್ಲಿ 350ಕ್ಕೂ ಅಧಿಕ ಅಂಕ ಪಡೆದವರು ತರಬೇತಿಗೆ ಅರ್ಹರು ಎಂದು ಹೇಳಿದ್ದಾರೆ.
ಜುಲೈ 2 ರಂದು ಬೆಳಿಗ್ಗೆ 11.30ಕ್ಕೆ ನಗರದ ಶಹಾಪುರ ಗೇಟ್ ಸಮೀಪದ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ಉಚಿತ ತರಬೇತಿಗೆ ವಿದ್ಯಾರ್ಥಿಗಳ ಆಯ್ಕೆ ಸಂದರ್ಶನ ನಡೆಯಲಿದೆ ಎಂದು ತಿಳಿಸಿದ್ದಾರೆ.
ಆಸಕ್ತ ವಿದ್ಯಾರ್ಥಿಗಳು https://shaheengroup.org/scholarship-2023/ ಲಿಂಕ್ ಬಳಸಿ ಸಂದರ್ಶನಕ್ಕೆ ಹೆಸರು ನೋಂದಾಯಿಸಬಹುದು ಎಂದು ಹೇಳಿದ್ದಾರೆ.
ಹೆಸರು ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗೆ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ (9986792323) ಅಥವಾ ಗೌರವ ಕಾರ್ಯದರ್ಶಿ ಶಿವಶಂಕರ ಟೋಕರೆ (9341652131) ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.