ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ನಗರದ ಜೆಡಿಎಸ್ ಕಛೇರಿ ಮುಂದೆ ವಿಧಾನ ಪರಿಷತ್ ಸದಸ್ಯ ಡಾ. ಟಿ.ಎ. ಶರವಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನೀರು ಹರಿಸುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕೆಂದು ಒತ್ತಾಯಿಸಲಾಯಿತು. ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.