ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ನಗರದ ಕಿಮ್ಸ್ ಬಳಿ ಇರುವ ಗಾಂಧಿಜೀಯವರ ಪ್ರತಿಮೆಗೆ ಶಾಸಕ ಮಹೇಶ ಟೆಂಗಿನಕಾಯಿ ಅವರ ನೇತೃತ್ವದಲ್ಲಿ ಮಾಲಾರ್ಪಣೆ ಮಾಡಲಾಯಿತು. ಹು-ಧಾ ಮಹಾನಗರ ಪಾಲಿಕೆ ಮೇಯರ್ ವೀಣಾ ಬರದ್ವಾಡ, ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ, ಸದಸ್ಯರಾದ ರೂಪಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.