ವಿಜಯಪುರ : ಭ್ರಷ್ಟಾಚಾರ ವಿರುದ್ಧದ ಜಾಗೃತಿ ಸಪ್ತಾಹ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ವೆಂಕಣ್ಣ ಹೊಸಮನಿ ಅವರು ಸರ್ಕಾರಿ ನೌಕರರಿಗೆ ಪ್ರಾಮಾಣಿಕ ಮತ್ತು ಪಾರದರ್ಶಕ ರೀತಿಯ ಕರ್ತವ್ಯ ನಿರ್ವಹಣೆ ಮತ್ತು ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿದರು.