ಧಾರವಾಡದ ರಪಾಟಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನೂತನ ಶಾಸಕರು ಹಾಗೂ ಸಚಿವರ ಅಭಿನಂದನಾ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಸಮಾರಂಭದಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಗಳಲ್ಲಿ ಹೆಚ್ಚು ಅಂಕಗಳಿಸಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ಸಮಾರಂಭದಲ್ಲಿ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ, ಶಾಸಕರಾದ ಮಹೇಶ್ ಟೆಂಗಿನಕಾಯಿ, ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಸೇರಿದಂತೆ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.