
ಕೋಲಾರ, ಆ,೧೨-ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಕೋಲಾರ ೭೭ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಗಸ್ಟ್ ೧೫, ೨೦೨೩ ರಂದು ಬೆಳಿಗ್ಗೆ ೯ಗಂಟೆಗೆ ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಆಟದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಧ್ವಜಾರೋಹಣವನ್ನು ಮಾನ್ಯ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್. ಸುರೇಶ್ ಅವರು ನೇರವೆರಿಸುವರು. ಅಧ್ಯಕ್ಷತೆಯನ್ನು ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಕೊತ್ತೂರು ಜಿ.ಮಂಜುನಾಥ್ ಅವರು ವಹಿಸುವರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಲೋಕಸಭಾ ಕ್ಷೇತ್ರದ ಸಂಸದ ಎಸ್.ಮುನಿಸ್ವಾಮಿ, ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಕೆ.ಎಂ, ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಕೆ.ಜಿ.ಎಫ್ ಶಾಸಕ ಡಾ|| ರೂಪಕಲಾ ಎಂ.ಶಶಿಧರ್, ಶ್ರೀನಿವಾಸಪುರ ಶಾಸಕರಾದ ಜಿ.ಕೆ ವೆಂಕಟಶಿವಾರೆಡ್ಡಿ, ಮುಳಬಾಗಿಲು ಶಾಸಕರಾದ ಸಮೃದ್ಧಿ ಮಂಜುನಾಥ್ ವಿಧಾನ ಪರಿಷತ್ ಸದಸ್ಯರಾದ ಎಂ.ಎಲ್ ಅನಿಲ್ ಕುಮಾರ್, ಡಾ|| ವೈ.ಎ ನಾರಾಯಣಸ್ವಾಮಿ, ಇಂಚರ ಗೋವಿಂದರಾಜು,ಚಿದಾನಂದ ಎಂ.ಗೌಡರು ಭಾಗವಹಿಸುವರು.