ವೃತ್ತಿ ವೇತನ ನೀಡದೆ ೨೧ ವರ್ಷಗಳಿಂದ ಸೇವೆ ಸಲ್ಲಿಸಿದ ಬಿಸಿಯೂಟ ನೌಕರರನ್ನು ಕೆಲಸದಿಂದ ಕೈ ಬಿಟ್ಟಿರುವ ಕ್ರಮವನ್ನು ಖಂಡಿಸಿ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷೆ ವರಲಕ್ಷ್ಮಿ ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ೫ ದಿನಗಳಿಂದ ಧರಣಿ ನಡೆಯುತ್ತಿದ್ದು ಹೊರ ಜಿಲ್ಲೆಗಳಿಂದ ಬಂದಿದ್ದ ಬಿಸಿಯೂಟ ನೌಕರರು ರಸ್ತೆಯಲ್ಲೇ ಊಟ ಮಾಡಿ ವಿನೂತನ ರೀತಿ ಪ್ರತಿಭಟನೆ ನಡೆಸಿದರು.