ಗದಗ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಲಾದ 450 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ಹಾಗೂ ಕ್ಯಾಥ್‍ಲ್ಯಾಬನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವೈದ್ಯಕೀಯ ಹಾಗೂ ಉನ್ನತ ಶಿಕ್ಷಣ ಸಚವರಾದ ಶರಣ ಪ್ರಕಾಶ ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಮತ್ತಿತರ ಗಣ್ಯರು, ಆಸ್ಪತ್ರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.