
ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ನಮ್ಮೆಲ್ಲರ ನೆಚ್ಚಿನ ನಾಯಕರು ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಜಗದೀಶ್ ಶೆಟ್ಟರ್ ಸಾಹೇಬರು ನನಗೆ ಆತ್ಮೀಯವಾಗಿ ಸನ್ಮಾನಿಸಿ ಆಶೀರ್ವದಿಸಿದ ಕ್ಷಣಗಳು.ಈ ಸಂದರ್ಭದಲ್ಲಿ ಸಾಬೂನು ಮತ್ತು ಮಾರ್ಜಕ ಕಂಪನಿಯ ಮಾಜಿ ನಿರ್ದೇಶಕರಾದ ಶ್ರೀ ಮಲ್ಲಿಕಾರ್ಜುನ್ ಸಾವಕಾರ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಶ್ರೀ ನಾಗೇಶ್ ಕಲಬುರ್ಗಿ, ಸರ್ವಧರ್ಮ ಸಮಾಜ ಸೇವಕರಾದ ಡಾ. ರಮೇಶ ಮಹಾದೇವಪ್ಪನವರ, ಸೇರಿದಂತೆ ಇನ್ನೂ ಅನೇಕ ಯುವ ಮುಖಂಡರುಗಳು ಉಪಸ್ಥಿತರಿದ್ದರು.