
ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ನೇಮಕಗೊಂಡ ಹಟೇಲಸಾಬ ಮುಲ್ಲಾ (ಕಲಂದರ) ಅವರನ್ನು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಾಬೂನು ಮತ್ತು ಮಾರ್ಜಕ ಕಂಪನಿಯ ಮಾಜಿ ನಿರ್ದೇಶಕರಾದ ಮಲ್ಲಿಕಾರ್ಜುನ್ ಸಾವಕಾರ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ನಾಗೇಶ್ ಕಲಬುರ್ಗಿ, ಸಮಾಜ ಸೇವಕರಾದ ಡಾ. ರಮೇಶ ಮಹಾದೇವಪ್ಪನವರ, ಸೇರಿದಂತೆ ಇನ್ನೂ ಅನೇಕ ಯುವ ಮುಖಂಡರುಗಳು ಉಪಸ್ಥಿತರಿದ್ದರು.