ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೆ ತಿಂಗಳು ೨೪, ೨೫, ೨೬ರಂದು ನಡೆಯಲಿರುವ ಇತಿಹಾಸ ಪ್ರಸಿದ್ಧ ಜನಪದ ಕ್ರೀಡೆ ಬೆಂಗಳೂರು ಕಂಬಳ ನಮ್ಮ ಕಂಬಳ ಕಾರ್ಯಕ್ರಮದ ಉದ್ಘಾಟನಾ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರವರಿಗೆ ಗೌರವಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಆಹ್ವಾನ ನೀಡಿದರು. ಇದೇ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಕೆ.ಉಮೇಶ್ ಶೆಟ್ಟಿ, ಕಾರ್ಯಾಧ್ಯಕ್ಷರಾದ ಗುರುಕಿರಣ್, ಉಪಾಧ್ಯಕ್ಷರಾದ ಗುಣ ರಂಜನ್ ಶೆಟ್ಟಿ ಹಾಗೂ ಬೆಂಗಳೂರು ಕಂಬಳ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.