ಸಂತ ಶ್ರೇಷ್ಠ ಕನಕದಾಸ ಜಯಂತಿಯನ್ನು ಗದಗ ನಗರದ ಹಾತಲಗೇರಿ ನಾಕಾದಲ್ಲಿ ಆಚರಿಸಲಾಯಿತು. ವಿಧಾನ ಪರಿಷತ ಸದಸ್ಯ ಎಸ್.ವಿ.ಸಂಕನೂರ ಅವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿದರು. ಗದಗ-ಬೆಟಗೇರಿ ನಗರ ಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ, ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೆಶಕ ವೀ. ಹಿರೇಮಠ, ನಗರಸಭೆ ಸದಸ್ಯರು, ಸಮುದಾಯದ ಗಣ್ಯರು, ಮುಖಂಡರುಗಳು ಉಪಸ್ಥಿತರಿದ್ದರು.