ನಗರದ ಹೆಚ್.ಎಸ್.ಆರ್. ಬಡಾವಣೆಯ ಪರಂಗಿಪಾಳ್ಯ ಗ್ರಾಮದಲ್ಲಿ ೬೮ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಮಾಜ ಸೇವಕರು ಹಾಗೂ ಹೆಚ್.ಎಸ್.ಆರ್.ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ.ವಾಸುದೇವ ರೆಡ್ಡಿರವರು ೪೫ಕ್ಕೂ ಹೆಚ್ಚು ಆಟೋ ಚಾಲಕರಿಗೆ ಸಮವಸ್ತ್ರ ವಿತರಣೆ ಮಾಡಿದರು. ಕಾರ್ಯಕ್ರಮದಲ್ಲಿ ಕೆ.ಪಿ.ಸಿ.ಸಿ. ಸದಸ್ಯರಾದ ಕೆ.ವಾಸುದೇವ್ ಬ್ರಿಗೇಡಿಯರ್ ಮೂರ್ತಿ, ವಕ್ತಾರರಾದ ಅನಿಲ್ ರೆಡ್ಡಿ, ಘಟಕದ ಅಧ್ಯಕ್ಷ ರಾಮಚಂದ್ರ ಮತ್ತು ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.