ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ನಗರದ ಕೋಟೆಕೆರೆ ಆವರಣದಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಚಾಲನೆ ನೀಡಿದರು. ನಗರದ ಕೋಟೆಯ ಮುಂಭಾಗದಿಂದ ಆರಂಭವಾದ ಮೆರವಣಿಗೆ ಸಂಗೊಳ್ಳಿ ರಾಯಣ್ಣನ ವೃತ್ತ, ಕೋಟ್9 ಮಾರ್ಗವಾಗಿ ಚನ್ನಮ್ಮ ವೃತ್ತದಿಂದ ಜಿಪಂ ಸಭಾಂಗಣದ ವರೆಗೆ ಸಾಗಿತು. ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ, ಶಾಸಕ ಅನಿಲ್ ಬೆನಕೆ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಪಾಲಿಕೆ ಆಯುಕ್ತ ಜಗದೀಶ ಕೆ.ಎಚ್., ನಗರ ಪೆÇಲೀಸ್ ಆಯುಕ್ತ ಡಾ.ತ್ಯಾಗರಾಜನ್, ಡಿಸಿಪಿಗಳಾದ ಡಾ. ವಿಕ್ರಮ್ ಆಮಟೆ, ಸಿ.ಐ.ನೀಲಗಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.