8 ಜನರ ಕೊಲೆಗೆ ಯತ್ನ: 12 ಜನರ ಬಂಧನ

ಕಲಬುರಗಿ,ಫೆ.28-ಜಿಲ್ಲೆಯ ಸೇಡಂ ತಾಲ್ಲೂಕಿನ ಊಡಗಿ ಗ್ರಾಮದಲ್ಲಿ ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಹೊಡೆದು 8 ಜನರ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಜನ ಆರೋಪಿಗಳನ್ನು ಪೊಲೀಸರು 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಒಂದು ಗುಂಪಿನ ಮೇಲೆ ಆರೋಪಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದರು. ಈ ಸಂಬಂಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಗಳ ಪತ್ತೆಗೆ ಎಸ್‍ಪಿ ಅಕ್ಷಯ್ ಹಾಕೆ ಅವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್‍ಪಿ ಶ್ರೀನಿಧಿ ಅವರ ನೇತೃತ್ವದಲ್ಲಿ ಚಿಂಚೋಳಿ ಡಿಎಸ್‍ಪಿ ಸಂಗಮನಾಥ ಎಸ್.ಹಿರೇಮಠ, ಶಹಾಬಾದ ಡಿಎಸ್‍ಪಿ ಶಂಕರಗೌಡ ಪಾಟೀಲ, ಮೂವರು ಸಿಪಿಐ, ಆರು ಜನ ಪಿಎಸ್‍ಐ ಮತ್ತು ಸಿಬ್ಬಂದಿಗಳನ್ನೊಳಗೊಂಡ 3 ಪ್ರತ್ಯೇಕ ತಂಡ ರಚಿಸಲಾಗಿತ್ತು. ಈ ತಂಡ ತನಿಖೆ ನಡೆಸಿ 24 ಗಂಟೆಯೊಳಗೆ 12 ಜನ ಆರೋಪಿಗಳನ್ನು ಬಂಧಿಸಿ, ಮಾರಕಾಸ್ತ್ರಗಳನ್ನು ಜಪ್ತಿ ಮಾಡಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ಯಶಸ್ವಿಯಾಗಿದೆ.