8 ತಿಂಗಳಲ್ಲಿ 9 ದೌರ್ಜನ್ಯ ಪ್ರಕರಣಗಳು ದಾಖಲು

ಬೀದರ: ಸೆ.25:ಬೀದರ್ ಉಪ ವಿಭಾಗ ವ್ಯಾಪ್ತಿಯಲ್ಲಿ ಎಂಟು ತಿಂಗಳ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ 9 ಪ್ರಕರಣಗಳು ದಾಖಲಾಗಿವೆ.

ಇಲ್ಲಿಯ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಬೀದರ್ ಉಪ ವಿಭಾಗದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಉಸ್ತುವಾರಿ ಸಮಿತಿಯ ತ್ರೈಮಾಸಿಕ ಸಭೆಯಲ್ಲಿ ಸಮಿತಿಯ ಸದಸ್ಯ ಕಾರ್ಯದರ್ಶಿಯಾದ ಸಮಾಜ ಕಲ್ಯಾಣ ಇಲಾಖೆಯ ಬೀದರ್ ತಾಲ್ಲೂಕು ಸಹಾಯಕ ನಿರ್ದೇಶಕ ಅನಿಲಕುಮಾರ ಮೇಲ್ದೊಡ್ಡಿ ಈ ಮಾಹಿತಿ ನೀಡಿದರು.ಒಂದು ಪ್ರಕರಣದ ಬಿ ರಿಪೆÇೀರ್ಟ್ ಸಲ್ಲಿಸಲಾಗಿದೆ. ಎರಡು ಪ್ರಕರಣಗಳು ತನಿಖೆ ಹಂತದಲ್ಲಿ ಇವೆ. ಐದು ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಆದಷ್ಟು ಬೇಗ ಪರಿಹಾರ ದೊರಕಿಸಿಕೊಡಬೇಕು ಎಂದು ಗರಿಮಾ ಪನ್ವಾರ್ ಸೂಚಿಸಿದರು.

ಇದೇ ವೇಳೆ ಸಫಾಯಿ ಕರ್ಮಚಾರಿ ಉಸ್ತುವಾರಿ ಸಮಿತಿಯ ಸಭೆ ಕೂಡ ಜರುಗಿತು. ಸಭೆಯಲ್ಲಿ ಸಫಾಯಿ ಕರ್ಮಚಾರಿಗಳಿಗೆ ಸ್ವ ಉದ್ಯೋಗಕ್ಕೆ ನೆರವು, ಪುನ???ವಸತಿ ಮತ್ತಿತರ ವಿಷಯಗಳ ಕುರಿತು ಚರ್ಚೆ ನಡೆಯಿತು.

ಬೀದರ್, ಭಾಲ್ಕಿ ಡಿವೈಎ???ಪಿ. ಬೀದರ್ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗದಗೆಪ್ಪ ಕುರಕುಂಟೆ, ಔರಾದ್ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಾಣಿಕರಾವ್ ಪಾಟೀಲ, ತಹಶೀಲ್ದಾರ್ ಮಹಮ್ಮದ್ ಶಕೀಲ್, ಸಮಾಜ ಕಲ್ಯಾಣ ಇಲಾಖೆಯ ಬೀದರ್ ಕಚೇರಿ ವ್ಯವಸ್ಥಾಪಕ ರಮೇಶ ಗೋಖಲೆ, ಔರಾದ್ ತಾಲ್ಲೂಕು ಸಹಾಯಕ ನಿರ್ದೇಶಕ ಸುಭಾಷ ನಾಗೂರೆ, ಸಫಾಯಿ ಕರ್ಮಚಾರಿ ಸಮಿತಿಯ ಸೈಯದ್ ಅಕ್ಬರ್ ಹಾಗೂ ಇತರರು ಇದ್ದರು.