80 ಲಕ್ಷ ಸನಿಹದಲ್ಲಿ ಸೋಂಕಿತರು

ನವದೆಹಲಿ, ಅ. ೨೮- ದೇಶಾದ್ಯಂತ ಕೊರೊನಾ ಮಹಾಮಾರಿಯ ಅಬ್ಬರ ಮುಂದುವರೆದಿದ್ದು , ಒಟ್ಟಾರೆ ಸೋಂಕಿತರ ಸಂಖ್ಯೆ ೮೦ ಲಕ್ಷದತ್ತ ಸಮೀಪಿಸುತ್ತಿದೆ. ಮಹಾಮಾರಿ ಸೋಂಕಿಗೆ ಬಲಿಯಾದವರ ಸಂಖ್ಯೆ ೧ ಲಕ್ಷ ೨೦ ಸಾವಿರ ದಾಟಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಇಂದು ಬೆಳಿಗ್ಗೆ ನೀಡಿರುವ ಮಾಹಿತಿ ಪ್ರಕಾರ, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೪೩,೮೯೩ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದುವರೆಗೂ ದೇಶದಲ್ಲಿ ದಾಖಲಾಗಿರುವ ಒಟ್ಟು ಸೋಂಕಿತರ ಸಂಖ್ಯೆ ೭೯,೯೦,೩೨೨ ಕ್ಕೆ ಏರಿಕೆಯಾಗಿದೆ. ಇದರಿಂದಾಗಿ ಮತ್ತೆ ಸೋಂಕಿತರ ಸಂಖ್ಯೆ ಏರುಮುಖ ದತ್ತ ಸಾಗುತ್ತಿರುವುದು ಗೋಚರಿಸುತ್ತಿದೆ.

ಕಳೆದ ೨೪ ಗಂಟೆಗಳಲ್ಲಿ ೫೦೮ ಸೋಂಕಿತರು ಇದುವರೆಗೂ ಮೃತಪಟ್ಟವರ ಸಂಖ್ಯೆ ೧ ಲಕ್ಷ ೨೦ ಸಾವಿರ ದ ಹತ್ತಕ್ಕೆ ತಲುಪಿದೆ.

ಇನ್ನೊಂದೆಡೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ೭ ಲಕ್ಷಕ್ಕಿಂತ ಕಡಿಮೆ ಇದೆ. ಒಟ್ಟಾರೆ ಸೋಂಕು ಪ್ರಕರಣಗಳ ಪೈಕಿ ಶೇಕಡ ಎಂಟಕ್ಕಿಂತ ಕಡಿಮೆ ಪ್ರಮಾಣದಲ್ಲಿ ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಪ್ರಸ್ತುತ ೬ ಲಕ್ಷ ಹತ್ತು ಸಾವಿರದ ೮೦೩ ಸಕ್ರಿಯ ಪ್ರಕರಣಗಳು ದಾಖಲಾಗಿದ್ದು ಸಂಬಂಧಿತ ರೋಗಿಗಳಿಗೆ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

ಈ ನಡುವೆ ಗುಣಮುಖ ಪ್ರಮಾಣ ಏರಿಕೆಯಾಗುತ್ತಿದ್ದು ಕಳೆದ ಒಂದು ದಿನದ ಅವಧಿಯಲ್ಲಿ ೫೮ ಸಾವಿರದ ೪೩೯ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಮನೆಗಳಿಗೆ ತೆರಳಿದ್ದಾರೆ. ಇದರಿಂದಾಗಿ ಒಟ್ಟು ೭೨ ಲಕ್ಷ ೫೯ ಸಾವಿರದ ೫೦೯ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಮಹಾಮಾರಿ ಯಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾದ ವರ ಹೆಚ್ಚುಕಡಿಮೆ ಶೇಕಡ ೯೦ಕ್ಕೂ ಹೆಚ್ಚಾಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇಕಡ ೭.೮೮ ರಷ್ಟಿದ್ದರೆ, ಸಾವಿನ ಪ್ರಮಾಣ ಶೇಕಡಾ ೧.೫೦ ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಕರ್ನಾಟಕ ಮಹಾರಾಷ್ಟ್ರ ಕೇರಳ ಪಶ್ಚಿಮ ಬಂಗಾಳ ಮತ್ತು ದೆಹಲಿ ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಉಳಿದ ರಾಜ್ಯಗಳಲ್ಲಿ ಮಹಾಮಾರಿಯ ತೀವ್ರತೆ ಕಡಿಮೆಯಾಗುತ್ತಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿವೆ. ಐದು ರಾಜ್ಯಗಳಲ್ಲಿ ಸೋಂಕಿತರ ಪ್ರಮಾಣಗಮನಿಸಿದರೆ ಇಡೀ ದೇಶದಲ್ಲಿ ದಾಖಲಾಗಿರುವ ಸೋಂಕಿತರ ಸಂಖ್ಯೆಯ ಶೇಕಡ ೫೩ರಷ್ಟು ಪಾಲಿದೆ ಎಂದು ಹೇಳಲಾಗಿದೆ

ಮತ್ತೊಂದೆಡೆ ಕೇಂದ್ರ ಗೃಹ ಸಚಿವಾಲಯ ನಿನ್ನೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಸೆಪ್ಟೆಂಬರ್ ೩೦ ರಂದು ಬಿಡುಗಡೆ ಮಾಡಲಾಗಿದ್ದ ೫ನೇ ಹಂತದ ಅನ್ಲಾಕ್ ನಿಯಮಗಳೇ ನವೆಂಬರ್ ಉತ್ತರ ವರೆಗೆ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಲಾಗಿದೆ.

ಪ್ರಕಾರ ಸಿನಿಮಾ ಮಂದಿರಗಳು ಮಲ್ಟಿಪ್ಲೆಕ್ಸ್ ಗಳು ಈಜುಕೊಳಗಳು ಕ್ರೀಡಾ ಚಟುವಟಿಕೆಗಳು ಮನೋರಂಜನಾ ಪಾರ್ಕಗಳು ಮುಂತಾದವು ಅಕ್ಟೋಬರ್ ೧೫ ರಿಂದ ಆರಂಭಿಸಲು ಅನುಮತಿ ನೀಡಲಾಗಿತ್ತು.

ಈ ನಡುವೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ವತಿಯಿಂದ ಮಾದರಿ ಪರೀಕ್ಷೆಗಳನ್ನು ನಡೆಸುವ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ. ನಿನ್ನೆವರೆಗೂ ೧೦ ಕೋಟಿ ೫೪ ಲಕ್ಷದ ೮೭ ಸಾವಿರಕ್ಕೂ ಅಧಿಕ ಮಾ ದ ರಿ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಂಡಳಿ ತಿಳಿಸಿದೆ.