80 ಲಕ್ಷ ರೂ. ವೆಚ್ಚದ ಆಕ್ಸಿಜನ್ ಘಟಕ ಲೋಕಾರ್ಪಣೆ

ದಾವಣಗೆರೆ, ಜೂ. 9:ಜಗಳೂರಿನ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ರೂ.80 ಲಕ್ಷ ವೆಚ್ಚದ ನೂತನ ಆಕ್ಸಿಜನ್ ಘಟಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್, ಸಂಸದ ಜಿ,.ಎಂ ಸಿದ್ದೇಶ್ವರ ಹಾಗೂ ಜಗಳೂರು ಶಾಸಕರಾದ ಎಸ್.ವಿ. ರಾಮಚಂದ್ರಪ್ಪ ಲೋಕಾರ್ಪಣೆಗೊಳಿಸಿದರು.ನಂತರ ಸಚಿವ ಬಿ.ಎ ಬಸವರಾಜ ಮಾತನಾಡಿ ಸಂಸದರ ಹಾಗೂ ಶಾಸಕರ ಮುತುವರ್ಜಿಯಿಂದ ಅತ್ಯಂತ ಸುಸಜ್ಜಿತ ಆಕ್ಸಿಜನ್ ಘಟಕ ಜಗಳೂರಿನಲ್ಲಿ ಆರಂಭವಾಗಿದ್ದು, ಈ ಘಟಕದ ಸದುಪಯೋಗ ಎಲ್ಲರಿಗೂ ಸಿಗಲಿ ಎಂದರು.ಈ ಘಟಕ ಸ್ಥಾಪನೆಗೆ ಎಲ್ಲಾ ರೀತಿಯ ಸಹಕಾರ ನೀಡಿರುವ ಆಕ್ಟ್ ಗ್ರಾಂಟ್ ಮತ್ತು ಮ್ಯಾಕ್ಸ್ವಿಂಡ್ ಸೋಲಾರ್ ಕಂಪನಿಯ ಎಲ್ಲಾ ಪದಾಧಿಕಾರಿಗಳಿಗೂ ಅಭಿನಂದಿಸಿರುವುದಾಗಿ ತಿಳಿಸಿದರು.15 ದಿನಗಳ ಅತ್ಯಲ್ಪ ಅವಧಿಯಲ್ಲಿ ಇಂತಹ ಬೃಹತ್ ಆಕ್ಸಿಜನ್ ಘಟಕವನ್ನು ನಿರ್ಮಿಸಿ ಸರ್ಕಾರದ ಜೊತೆ ಕೈಜೋಡಿಸಿರುವ ಕಂಪನಿಯ ಅಧ್ಯಕ್ಷರು ಹಾಗೂ ಅಧಿಕಾರಿಗಳು ಇನ್ನೂ ಹೆಚ್ಚು ಸಮಾಜಮುಖಿ ಕಾರ್ಯ ಮಾಡಬೇಕೆಂದರು. ಕೋವಿಡ್ ಸೋಂಕಿತರಿಗೆ ಯಾವುದೇ ರೀತಿಯಲ್ಲಿ ಆಕ್ಸಿಜನ್ ಕೊರತೆ ಉಂಟಾಗಬಾರದು ಹಾಗೂ ಚಿಕಿತ್ಸೆಯಿಂದ ವಂಚಿತರಾಗಬಾರದೆAದು ಆಕ್ಸಿಜನ್ ಘಟಕವನ್ನು ಸ್ಥಾಪಿಸಲಾಗಿದ್ದು, ಸೋಂಕಿತರಿಗೆ ಬೇಕಾದ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ. ವಿಜಯ ಮಹಾಂತೇಶ್ ಬಿ. ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಉಪವಿಭಾಗಾಧಿಕಾರಿ ಮಮತ ಹೊಸಗೌಡರ್, ಡಿಹೆಚ್‌ಒ ಡಾ. ನಾಗರಾಜ್, ಡಾ.ಯತೀಶ್ ಇನ್ನುಳಿದ ತಾಲ್ಲೂಕು ಅಧಿಕಾರಿಗಳು ಇದ್ದರು.