800 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್‌ಗೆ ಚಾಲನೆ

ದಾವಣಗೆರೆ.ಜೂ.೧:ಹೊನ್ನಾಳಿ ತಾಲ್ಲೂಕಿನ ಅರಬಗಟ್ಟೆ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ 800 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್‌ನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ್ ಹಾಗೂ ಶಾಸಕ ಎಂ.ಪಿ.ರೇಣುಕಾಚಾರ್ಯ ಲೋಕಾರ್ಪಣೆಗೊಳಿಸಿದರು.ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿದ ಸಚಿವರಾದ ಬಿ.ಎ.ಬಸವರಾಜ್ ಮಾತನಾಡಿ, ಈ ಕೋವಿಡ್ ಕೇರ್ ಸೆಂಟರ್‌ನ ಉಪಯೋಗ ಹೊನ್ನಾಳಿ ಹಾಗೂ ನ್ಯಾಮತಿ ತಾಲ್ಲೂಕಿನ ಜನತೆಗೆ ದೊರೆಯುವಂತಾಗಬೇಕು. ಯಾವುದೇ ರೋಗ ಲಕ್ಷಣ ಕಂಡು ಬಂದ ತಕ್ಷಣ ಸೋಂಕಿತರು ಮನೆಗಳಲ್ಲೆ ಐಸೋಲೇಷನ್ ಆಗದೇ ಕೋವಿಡ್ ಸೆಂಟರ್‌ಗಳಿಗೆ ಬರಬೇಕು. ಇದರಿಂದ ಉತ್ತಮ ಆರೈಕೆ ಹಾಗೂ ಚಿಕಿತ್ಸೆ ದೊರೆತು ಸೋಂಕಿತರು ಬಹು ಬೇಗ ಗುಣಮುಖರಾಗಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಈ ತಾಲ್ಲೂಕಿನ ಶಾಸಕರಾದ ರೇಣುಕಾಚಾರ್ಯರವರು ಕಾರ್ಯ ಶ್ಲಾಘನೀಯ ಎಂದರು. ಶಾಸಕರು ದಣಿವರಿಯದೇ ತಾಲ್ಲೂಕಿನಾದ್ಯಂತ ಸಂಚರಿಸಿ ಸೋಂಕಿತರಲ್ಲಿ ಮನೋಸ್ಥೆöÊರ್ಯ ಹೆಚ್ಚಿಸುತ್ತಿದ್ದಾರೆ. ಇವರಿಗೆ ಜಿಲ್ಲಾಡಳಿತವು ಸಂಪೂರ್ಣ ಬೆಂಬಲ ನೀಡುತ್ತಿದ್ದು, ಉತ್ತಮ ಕಾರ್ಯ ತಾಲ್ಲೂಕಿನಲ್ಲಿ ಆಗುತ್ತಿದೆ. ಮತ್ತು ತಾಲ್ಲೂಕು ಆಡಳಿತ ಹಾಗೂ ಅಧಿಕಾರಿಗಳು ಬಹುವಾಗಿ ಶ್ರಮಿಸುತ್ತಿದ್ದಾರೆ. ಇದರಿಂದ ಸೋಂಕಿನ ಪ್ರಮಾಣವು ಕಡಿಮೆಯಾಗಲು ಸಹಕಾರಿಯಾಗಲಿದೆ ಎಂದರು. ಮುಖ್ಯಮಂತ್ರಿಗಳಲ್ಲಿ ಇನ್ನು ಒಂದು ವಾರ ಅಥವಾ 15 ದಿನಗಳ ಕಾಲ ಲಾಕ್‌ಡೌನ್ ಮುಂದುವರಿಸಲು ಪ್ರಸ್ತಾಪಿಸುತ್ತೇನೆ ಎಂದ ಅವರು ಎರಡನೇ ಅಲೆ ಪ್ರಾರಂಭವಾದಾಗಿನಿಂದ ವಾರದಲ್ಲಿ ಎರಡು ದಿನ ಜಿಲ್ಲೆಯಲ್ಲಿ ವಾಸ್ತವ್ಯ ಮಾಡಿ ಎಲ್ಲಾ ತಾಲ್ಲೂಕುಗಳ ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇನೆ ಎಂದರು.ಶಾಸಕರಾದ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ಮೊದಲ ಅಲೆ ಆರಂಭವಾದಾಗಿನಿAದ ಎಲ್ಲರೊಳಗೂಡಿ ಕೋವಿಡ್ ನಿಯಂತ್ರಣಕ್ಕೆ ಅನೇಕ ಕಾರ್ಯಗಳನ್ನು ಮಾಡಲಾಗುತ್ತಿದೆ. ಅಧಿಕಾರಿಗಳ ಜನಪ್ರತಿನಿಧಿಗಳ ಸಹಕಾರದೊಂದಿಗೆ ಸಾರ್ವಜನಿಕರಿಗೆ ಮಾಸ್ಕ್, ಸ್ಯಾನಿಟೈಸರ್, ಫುಡ್ ಕಿಟ್ ನೀಡಲಾಗಿದೆ. ಹಾಗೂ 10 ಸಾವಿರ ಜನರಿಗೆ ಎರಡು ಹೊತ್ತು ಊಟ, 8 ಚೆಕ್ ಪೋಸ್ಟ್ ಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು.ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ವಿಜಯ ಮಹಾಂತೇಶ ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಉಪವಿಭಾಗ ಅಧಿಕಾರಿ ಮಮತಾ ಹೊಸಗೌಡರ್, ಡಿಎಚ್‌ಒ ಡಾ. ನಾಗರಾಜು, ತಹಶೀಲ್ದಾರ್ ಪಟ್ಟರಾಜ ಗೌಡ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು