ಬೀದರ: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯಂತೆ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಎ.ಬಿ.ಸಿ.ಡಿ. ವರ್ಗಿಕರಣ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಆದಿಜಾಂಬವ ಸಂಘದ ನೇತೃತ್ವದಲ್ಲಿ ತಮಟೆ ಚಳುವಳಿ ಕೈಗೊಳ್ಳಲಾಯಿತು.