ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಚಿತ್ರನಟ ಯಶ್ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಕಟೌಟ್ ಕಟ್ಟುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಮೂವರು ಯುವಕರು ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಸಿ.ಸಿ. ಪಾಟೀಲ್ ಅವರು ಅವರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳುವ ಮೂಲಕ ತಲಾ 10,000 ಪರಿಹಾರ ನೀಡಿದರು. ಈ ಸಂದರ್ಭದಲ್ಲಿ ಶಿರಹಟ್ಟಿ ಮಂಡಲ ಬಿಜೆಪಿ ಅಧ್ಯಕ್ಷರಾದ ಫಕೀರೇಶ ರಟ್ಟಿಹಳ್ಳಿ, ಪ್ರಧಾನ ಕಾರ್ಯದರ್ಶಿ ಗಂಗಾಧರ ಮೆಣಸಿನಕಾಯಿ, ಲಕ್ಷ್ಮೇಶ್ವರ ನಗರ ಘಟಕದ ಅಧ್ಯಕ್ಷ ದುಂಡೇಶ ಕೊಟ್ಟಗಿ, ಮುಖಂಡರಾದ ಸಂತೋಷ್ ಚಕ್ರಸಾಲಿ, ಬಸವರಾಜ್ ಇಟಗಿ, ಅನಿಲ ಮುಳುಗುಂದ, ನಾಗರಾಜ್ ಹುನುಗುಂದ, ನವೀನ್ ಹಿರೇಮಠ ಸೇರಿದಂತೆ ಅನೇಕರಿದ್ದರು.