ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಹರಿಹರ ಗೃಹರಕ್ಷಕ ದಳ, ಪೊಲೀಸ್ ಇಲಾಖೆ ಇವರ ಆಶ್ರಯದಲ್ಲಿ ಜಾಗೃತಿ ಜಾಥವನ್ನು ಮಾಡಲಾಯಿತು. ನಗರ ಪೋಲಿಸ್ ಠಾಣೆಯಿಂದ ಪ್ರಾರಂಭಗೊಂಡ ಜಾಥಾ ಪಿಬಿ ರಸ್ತೆ ಮೂಲಕ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿ ವರ್ಗದವರು ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದರು.