82 ಕೊರೊನಾ ಪಾಸಿಟಿವ್ :07 ಜನರ ಸಾವು

ಕಲಬುರಗಿ:ಜೂ.1: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 82 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , 07 ಜನರು ಸಾವಿಗೀಡಾಗಿದ್ದಾರೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 60156 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.
340 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ.ಇಂದು ಪಾಸಿಟಿವ್ ಗಿಂತ ಆಸ್ಪತ್ರೆಯಿಂದ ಬಿಡುಗಡೆ ಯಾದವರೆ ಅಧಿಕವಾಗಿದ್ದಾರೆ. ಈ ವರೆಗೆ 57861 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
1520 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒ ಟ್ಟು 07 ಜನರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಂದು 07 ಜನರ ಸಾವಿನೊಂದಿಗೆ ಈ ವರೆಗೆ 775 ಜನರು ಸಾವಿಗೀಡಾದಂತಾಗಿದೆ .