ಹಳೇಹುಬ್ಬಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದವರಿಗೆ ಉಚ್ಚ ನ್ಯಾಯಾಲಯ ಜಾಮೀನು ನೀಡಿದ ಹಿನ್ನೆಲೆಯಲ್ಲಿ ನಗರದ ಹಜರತ್ ಸಯ್ಯದ ಫತೇಶಾವಲಿ ದರ್ಗಾದಲ್ಲಿ ಅಂಜುಮನ್-ಎ-ಇಸ್ಲಾಂ ಹುಬ್ಬಳ್ಳಿ ವತಿಯಿಂದ ಫಾತೆಹಾಖಾನಿ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆ ಅಧ್ಯಕ್ಷ ಎಂ.ಸಿ. ಸವಣೂರ, ಉಪಾಧ್ಯಕ್ಷ ಅಲ್ತಾಫನವಾಜ ಕಿತ್ತೂರ, ಅವರನ್ನು ಸನ್ಮಾನಿಸಲಾಯಿತು. ಪದಾಧಿಕಾರಿಗಳು, ಆಸ್ಪತ್ರೆ ಶಿಕ್ಷಣ ಮಂಡಳಿ ಸದಸ್ಯರು, ಕಾರ್ಯಕಾರಿ ಸದಸ್ಯರು ಉಪಸ್ಥಿತರಿದ್ದರು.