ರಾಜಕೀಯ ದುರುದ್ದೇಶದಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿರುವುದು ಖಂಡನೀಯವಾಗಿದ್ದು, ಅವರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಹುಬ್ಬಳ್ಳಿಯ ತಹಶಿಲ್ದಾರ ಮೂಲಕ ರಾಷ್ಟ್ರಪತಿಯವರಿಗೆ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಅಲ್ತಾಫ್ ಹಳ್ಳೂರ, ಬಂಗಾರೇಶ ಹಿರೇಮಠ, ರಾಜಶೇಖರ ಮೆಣಸಿನಕಾಯಿ, ಶರಣಪ್ಪ ಕೊಟಗಿ, ಮೋಹನ್ ಹಿರೇಮನಿ, ಸುರೇಶ ಸವಣೂರ, ಬಸವರಾಜ ಕಿತ್ತೂರ, ಕಲ್ಲಪ್ಪ ಎಲಿವಾಳ, ಬಸವರಾಜ ಮೆಣಸಗಿ, ಮೋಹನ ಹೊಸಮನಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.