ಭಾರತದ ಇತಿಹಾಸದಲ್ಲಿ ಅಪ್ರತಿಮ ಶೌರ್ಯ ಹಾಗೂ ಸಾಹಸದ ಮೂಲಕ ಲಕ್ಷಾಂತರ ಭಾರತೀಯರಿಗೆ ಪ್ರೇರಣಾ ಶಕ್ತಿಯಾಗಿರುವ ಛತ್ರಪತಿ ಶಿವಾಜಿ ಮಹಾರಾಜರ 394ನೇ ಜಯಂತಿ ಅಂಗವಾಗಿ ಪೂರ್ವ ಕ್ಷೇತ್ರದ ಶಾಸಕರು, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಪ್ರಸಾದ ಅಬ್ಬಯ್ಯ ಅವರು ಇಲ್ಲಿನ ವಿದ್ಯಾನಗರದ ಮರಾಠಾ ಭವನ ಬಳಿಯ ಅಶ್ವಾರೂಢ ಶಿವಾಜಿ ಮಹಾರಾಜರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಮೊದಲಾದ ಗಣ್ಯರು ಇದ್ದರು.