ಮುಂಡರಗಿ ತಾಲೂಕು ಬಿಡನಾಳ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ.ವೈ. ಕೊಪ್ಪನ್ನವರ, ಉಪಾಧ್ಯಕ್ಷರಾದ ಸವಿತಾ ಲಮಾಣಿ, ಸಮುದಾಯದ ಮುಖಂಡರು, ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು, ಗ್ರಾಮ ಮಟ್ಟದ ಅಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.