ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಶ್ರೀ ಜಗದ್ಗುರು ರೇಣುಕಾಚಾರ್ಯ ಕಾನೂನು ಮಹಾವಿದ್ಯಾಲಯ ಸಂಯುಕ್ತಾಶ್ರಯದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಬೆಂಗಳೂರು ವಲಯ -೧ ಮಟ್ಟದ ಯುವ ಜನೋತ್ಸವ ಸ್ಪರ್ಧಾ ಕಾರ್ಯಕ್ರಮವನ್ನು ಕೆ.ಎಸ್.ಎಲ್.ಯು. ಡೀನ್ ಪ್ರೊ. ಡಾ.ಜಿ.ಬಿ.ಪಾಟೀಲ್ ಸಂಸ್ಥೆಯ ಕಾರ್ಯದರ್ಶಿ ಪ್ರಭುದೇವ್ ಕಲ್ಮಠ್ ರವರು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ವೇದಿಕೆಯಲ್ಲಿ ಸಂಸ್ಥೆಯ ಗುರು ಸ್ವಾಮಿಯವರು, ಕಾಲೇಜಿನ ಪ್ರಾಂಶುಪಾಲೆ ಡಾ. ಜಯಶ್ರೀ ಆರ್. ಸಾಲಿಮಠ ರವರು, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ವೇದಿಕೆಯ ಉಪ ನಿರ್ದೇಶಕಿ ಶ್ರೀಮತಿ ಜ್ಯೋತಿ ಎಂ.ಎನ್.ರವರು ಉಪಸ್ಥಿತರಿದ್ದರು.