ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ, ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ಮತ್ತು ಕೆಎಂಎಫ್ ಸಂಸ್ಥೆ ಸಹಭಾಗಿತ್ವದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ ಒಂದರಿಂದ 10ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರ ಸಾಯಿ ಶೂರ್ ರಾಗಿ ಹೆಲ್ತ್ ಮಿಕ್ಸ್ ಹಾಲು ವಿತರಣೆ ಕಾರ್ಯಕ್ರಮ ನಡೆಯಿತು. ಡಾ. ಎಸ್.ವಿ. ಬಂಗಾರಿಮಠ, ವಾಯ್.ಎಚ್. ಬಣವಿ, ಬಿ.ಎಫ್.ಚುಳುಕಿ, ಜಿ.ಎಸ್. ಹುಬ್ಬಳ್ಳಿ, ಆರ್.ಬಿ.ಪಾಟೀಲ, ದುರಗೇಶ ಮಾದರ, ಎಸ್.ಡಿ.ಎಂ.ಸಿ ಸದಸ್ಯರು, ಪ್ರಧಾನ ಗುರುಗಳು ಹಾಗೂ ಎಲ್ಲಾ ಶಿಕ್ಷಕ ವೃಂದ ಹಾಜರಿದ್ದರು.