ನಗರದ ವಿಜಯನಗರದ ಮನುವನ ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಇಂದು ಕರವೇ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವ ವಿ. ಸೋಮಣ್ಣ ಅವರು ಧ್ವಜಾರೋಹಣ ನೆರವೇರಿಸಿದರು. ಅಧ್ಯಕ್ಷ ಟಿ.ಎ. ನಾರಾಯಣಗೌಡ, ಮಾಜಿ ಎಂ.ಎಲ್.ಸಿ. ಅಶ್ವತ್ಥ ನಾರಾಯಣ ಮತ್ತಿತರರು ಭಾಗವಹಿಸಿದ್ದರು.