ತುಮಕೂರಿನ ಸಿದ್ದಗಂಗಾ ಮಠಕ್ಕೆ ಮಾಜಿ ಸಚಿವ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಭೇಟಿ ನೀಡಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಶಾಸಕರಾದ ಜಿ.ಬಿ ಜ್ಯೋತಿಗಣೇಶ್, ಬಿ. ಸುರೇಶ್ ಗೌಡ, ಚಿದಾನಂದಗೌಡ, ಮುಖಂಡರಾದ ವೈ.ಹೆಚ್ ಹುಚ್ಚಯ್ಯ, ಹೆಬ್ಬಾಕ ರವೀಶ್, ಲಕ್ಷ್ಮೀಕಾಂತ್, ಡಾ. ಪರಮೇಶ್, ಬಿ.ಕೆ ಮಂಜುನಾಥ್, ಅನಿಲ್‌ಕುಮಾರ್ ಮತ್ತಿತರರು ಚಿತ್ರದಲ್ಲಿದ್ದಾರೆ.