ಚೆಕ್‍ಪೋಸ್ಟ್‍ಗಳಿಗೆ ಸಹಾಯಕ ಚುನಾವಣಾಧಿಕಾರಿ ಎಂ.ಕಾರ್ತಿಕ್ ಭೇಟಿ, ಪರಿಶೀಲನೆ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಏ.೧:ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ವಿವಿಧ ಚೆಕ್‍ಪೋಸ್ಟ್‍ಗಳಿಗೆ ಭಾನುವಾರ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಳ್ಳಕೆರೆ ರಸ್ತೆಯ ಕೆಳಗಳಹಟ್ಟಿ, ತುರವನೂರು ರಸ್ತೆ ಸೇರಿದಂತೆ ಇತರೆ ಸ್ಥಳಗಳಲ್ಲಿ ಸ್ಥಾಪಿಸಿರುವ ಚೆಕ್‍ಪೋಸ್ಟ್‍ಗಳಿಗೆ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಅವರು ಭೇಟಿ ನೀಡಿ, ಖುದ್ದು  ವಾಹನಗಳ ತಪಾಸಣೆ ನಡೆಸಿದರು.