ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಜಿಲ್ಲಾಡಳಿತ, ಜಿಪಂ, ಸ್ವೀಪ್ ಸಮಿತಿ ಹಾಗೂ ಬಿಮ್ಸ್ ಆಶ್ರಯದಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲು ಮ್ಯಾರಾಥಾನ್ ನಡಿಗೆಗೆ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಚಾಲನೆ ನೀಡಿದರು. ಬಿಮ್ಸ್ ನಿರ್ದೇಶಕರು, ಪ್ರಾಧ್ಯಾಪಕರು ಹಾಗೂ ಅಧಿಕಾರಿಗಳು ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.