ಕಲಬುರಗಿ : ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಬಿಜ್ಜಗೂಪಿ ಎಂಬ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಮೂರ್ತಿಯನ್ನು ವಿರೂಪಗೊಳಿಸಿದ ದುಷ್ಕರ್ಮಿಗಳನ್ನು ಬಂಧಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ವೀರಶೈವ ಲಿಂಗಾಯತ ಯುವ ವೇದಿಕೆ ಆಗ್ರಹಿಸಿದೆ.