ವಿಶ್ವ ಜ್ಞಾನಿ, ಸಂವಿಧಾನ ಶಿಲ್ಪಿ, ಭಾರತ ರತ್ನ, ಮಹಾ ಮಾನವತಾ ವಾದಿ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್‌ರವರ ೧೩೩ನೇ ಜಯಂತ್ಯೋತ್ಸವ ಪ್ರಯುಕ್ತ ದಲಿತ ಸಂಘರ್ಷ ಸಮಿತಿ (ಸಮತಾವಾದ) ರಾಜ್ಯಾಧ್ಯಕ್ಷ ಹೆಚ್. ಮಾರಪ್ಪ ಅವರ ನೇತೃತ್ವದಲ್ಲಿಂದು ನಗರದ ಬನಪ್ಪ ಪಾರ್ಕ್‌ನಿಂದ ವಿಧಾನ ಸೌಧದ ಬಳಿ ಇರುವ ಅಂಬೇಡ್ಕರ್ ಪ್ರತಿಮೆಯವರೆಗೆ ಬೃಹತ್ ಕಾಲ್ನಡಿಗೆ ಜಾಥಾ ಹಾಗೂ ಬೈಕ್ ರ್‍ಯಾಲಿ ನಡೆಸಲಾಯಿತು. ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.