ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ಅವರ 133 ನೇ ಜಯಂತ್ಯೋತ್ಸವ ಪ್ರಯುಕ್ತ ನಗರದ ಪ್ರಧಾನ ಅಂಚೆ ಕಛೇರಿ ಬಳಿಯಲ್ಲಿನ ಡಾ. ಅಂಬೇಡ್ಕರ್ ಅವರ ಪ್ರತಿಮೆಗೆ ಸಮತಾ ಸೇನಾ ಕರ್ನಾಟಕ ಹಾಗೂ ವಿವಿಧ ದಲಿತ ಸಂಘ ಸಂಸ್ಥೆಗಳ ಮಹಾ ಮಂಡಳದ ವತಿಯಿಂದ ಮಾಲಾರ್ಪಣೆ ಮಾಡಿ ಗೌರವ ಸಮರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಮತಾ ಸೇನಾ ರಾಜ್ಯಾಧ್ಯಕ್ಷ ಗುರುನಾಥ ಉಳ್ಳಿಕಾಶಿ ಸೇರಿದಂತೆ ಮುಖಂಡರುಗಳು ಉಪಸ್ಥಿತರಿದ್ದರು.