ಹಾವೇರಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಪುತ್ರ ಭರತ್ ಬೊಮ್ಮಾಯಿ, ಮಾಜಿ ಸಚಿವ ಬಿ. ಸಿ. ಪಾಟೀಲ್, ಮಾಜಿ ಶಾಸಕ ವೀರೂಪಾಕ್ಷಪ್ಪ ಬಳ್ಳಾರಿ ಹಾಗೂ ಶಾಸಕ ಚಂದ್ರು ಲಮಾಣಿ ಉಪಸ್ಥಿತರಿದ್ದರು.