ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಅವರು ಇಂದು ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರಿಗೆ ನಾಮಪತ್ರವನ್ನು ಸಲ್ಲಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಉಪಸ್ಥಿತರಿದ್ದರು.