ಕಲಬುರಗಿ:ಕೃಷಿ ಇಲಾಖೆ, ಕೃಷಿ ಸಂಶೋಧನಾ ಕೇಂದ್ರ ಹಾಗೂ ಕೃಷಿ ವಿಜ್ಞಾನ ಕೇಂದ್ರ ಇವುಗಳ ಸಹಯೋಗದೊಂದಿಗೆ ತೊಗರಿ, ಹತ್ತಿ ಸೇರಿದಂತೆ ಇತರೆ ಬೆಳೆಗಳ ಕೀಟ, ರೋಗ ಹಾಗೂ ಹತೋಟಿಗೆ ಸಂಬಂಧಿಸಿದಂತೆ 2020-21ನೇ ಸಾಲಿನ ಕ್ಷಿಪ್ರ ಸಂಚಾರ ಪೀಡೆ ಸಮೀಕ್ಷೆಗೆ ಕಲಬುರಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಸೋಮವಾರ ಚಾಲನೆ ನೀಡಲಾಯಿತು.